ರಶ್ಮಿಕಾ ಮಂದಣ್ಣ

0

 KANNADA HEROINES

ರಶ್ಮಿಕ ಮಂದಣ್ಣ




ರಶ್ಮಿಕಾ ಮಂದಣ್ಣ (ಜನನ: ೫ ಏಪ್ರಿಲ್ ೧೯೯೬), ಒಬ್ಬ ಭಾರತೀಯ ರೂಪದರ್ಶಿ ಹಾಗೂ ಕನ್ನಡ ಚಿತ್ರನಟಿ. ತನ್ನ ವೃತ್ತಿಜೀವನವನ್ನು ಒಬ್ಬ ರೂಪದರ್ಶಿಯಾಗಿ ಪ್ರಾರಂಭಿಸಿದ ಅವರು ಕನ್ನಡ ಚಲನಚಿತ್ರ ಕಿರಿಕ್ ಪಾರ್ಟಿ​ಯೊಂದಿಗೆ ೨೦೧೬ರಲ್ಲಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು.ಕಿರಿಕ್ ಪಾರ್ಟಿಯ ನಂತರ ಕರ್ನಾಟಕ ಕ್ರಶ್ ಎನಿಸಿಕೊಂಡಿದ್ದ ರಶ್ಮಿಕಾ ಅವರನ್ನು, ಇದೀಗ ನ್ಯಾಷನಲ್ ಕ್ರಶ್ 2020 ಎಂದು ಗೂಗಲ್ ಇಂಡಿಯಾ ಕರೆದಿದೆ.

ಆರಂಭಿಕ ಮತ್ತು ವೈಯಕ್ತಿಕ ಜೀವನ

ರಶ್ಮಿಕಾ ಅವರು ಕರ್ನಾಟಕದ ಕೊಡಗು ಜಿಲ್ಲೆಯ ವಿರಾಜಪೇಟೆ​ಯಲ್ಲಿ ಒಂದು ಕೊಡವ ಕುಟುಂಬದಲ್ಲಿ ಜನಿಸಿದರು. ಇವರು ಕೂರ್ಗ್ ಪಬ್ಲಿಕ್ ಸ್ಕೂಲ್ ನಲ್ಲಿ ಆರಂಭಿಕ ವಿಧ್ಯಾಬ್ಯಾಸವನ್ನು ಪಡೆದರು, ಮೈಸೂರು ಇನ್ಸ್ಟಿಟ್ಯೂಟ್ ಆಫ್ ಕಾಮರ್ಸ್ ಮತ್ತು ಆರ್ಟ್ಸ್ ನಲ್ಲಿ ಪದವಿ ಪೂರ್ವ ಶಿಕ್ಷಣವನ್ನು ಪಡೆದರು. ಎಂ.ಎಸ್.ರಾಮಯ್ಯ ಕಾಲೇಜ್ ಆಫ್ ಆರ್ಟ್ಸ್, ಸೈನ್ಸ್ & ಕಾಮರ್ಸ್ನಿಂದ ಸೈಕಾಲಜಿ, ಜರ್ನಲಿಸಮ್ ಮತ್ತು ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದರು.
ರಶ್ಮಿಕಾ ರವರು ೨೦೧೪ ರ ಬೆಂಗಳೂರು ಟೈಮ್ಸ್ ನ ೨೫ ಅತ್ಯಂತ ಅಪೇಕ್ಷಣೀಯ ಮಹಿಳೆಯರ ಪಟ್ಟಿಯಲ್ಲಿ ತಮ್ಮ ಸ್ಥಾನವನದನು ಗಿಟ್ಟಿಸಿಕೊಂಡರು. ೨೦೧೬ ರಲ್ಲಿ ಅವರು ೨೪ನೇ ಸ್ಥಾನದಲ್ಲಿದ್ದರು ನಂತರ ೨೦೧೭ ರಲ್ಲಿ ಅವರು 'ಮೊದಲ ಬಾರಿಗೆ' ಬೆಂಗಳೂರ್ ಟೈಮ್ಸ್ ೨೦೧೭ರ ಅತ್ಯಂತ ಅಪೇಕ್ಷಣೀಯ ಮಹಿಳೆಯರ ಪಟ್ಟಿಯಲ್ಲಿ ಮೊದಲ ಸ್ಥಾನಬನ್ನು ತಮ್ಮದಾಗಿಸಿಕೊಂಡರು.

ವೃತ್ತಿ ಜೀವನ


ರಶ್ಮಿಕಾ ಅವರು ೨೦೧೪ ರಲ್ಲಿ ಮಾಡೆಲಿಂಗ್ ಪ್ರಾರಂಭಿಸಿದರು. ಅದೇ ವರ್ಷ ಅವರು ಕ್ಲೀನ್ ಅಂಡ್ ಕ್ಲಿಯರ್ ಫ್ರೆಶ್ ಫೇಸ್ ಆಫ್ ಇಂಡಿಯಾ ಪ್ರಶಸ್ತಿಯನ್ನು ತಮ್ಮ ಮುಡಿಗೇರಿಸಿಕೊಂಡರು ಹಾಗು ಕ್ಲೀನ್ ಅಂಡ್ ಕ್ಲಿಯರ್ ನ ಬ್ರಾಂಡ್ ಅಂಬಾಸಿಡರ್ ಆಗಿದ್ದರು. ನಂತರ ಅವರು ಲಾಮೋಡ್ ಬೆಂಗಳೂರಿನ ಅತ್ಯತ್ತಮ ರೂಪದರ್ಶಿ ಹುಡುಕಾಟ ೨೦೧೫ ರಲ್ಲಿ ಟಿ.ವಿ.ಸಿ ಯ ಪ್ರಶಸ್ತಿಯನ್ನು ಪಡೆದರು. ಈ ಸ್ಪರ್ಧೆಯಲ್ಲಿ ಅವರ ಚಿತ್ರಗಳು ಕಿರಿಕ್ ಪಾರ್ಟಿ ಚಲನಚಿತ್ರದ ತಯಾರಕರನ್ನು ಆಕರ್ಷಿಸಿತು, ನಂತರ ಆಕೆಯು ೨೦೧೬ ರ ಆರಂಭದಲ್ಲಿ ನಾಯಕಿ ನಟಿಯಾಗಿ ನಟಿಸಿದರು. ದಿ ಟೈಮ್ಸ್ ಆಫ್ ಇಂಡಿಯಾ ದ ಸಂದರ್ಶನವೊಂದರಲ್ಲಿ ಅವರು ಹೀಗೆ ಹೇಳಿದರು: "ಕಿರಿಕ್ ಪಾರ್ಟಿಯ ತಯಾರಕರು ಕ್ಲೀನ್ ಅಂಡ್ ಕ್ಲಿಯರ್ ಫ್ರೆಶ್ ಫೇಸ್ ಆಫ್ ಇಂಡಿಯಾ ೨೦೧೪ರ ಸ್ಪರ್ಧೆಯಿಂದ ನನ್ನ ಚಿತ್ರವನ್ನು ಕಂಡರು - ಅದರಲ್ಲಿ ನಾನು ಕಾಲೇಜು ಸುತ್ತಿನಲ್ಲಿ ನೃತ್ಯ ಮಾಡುತ್ತಿದ್ದೆ. ಚಿತ್ರದಲ್ಲಿ ನಟಿಸುವಂತೆ ಕೇಳಿಕೊಂಡರು. ನಾನು ಯಾವಾಗಲೂ ಚಿತ್ರಗಳಲ್ಲಿ ನಟಿಸಬೇಕೆಂದು ಬಯಸಿದ್ದೆ.ಇವರು ಕಿರಿಕ್ ಪಾರ್ಟಿ ಚಲನಚಿತ್ರದಲ್ಲಿ ಕರ್ಣ(ರಕ್ಷಿತ್ ಶೆಟ್ಟಿ)ನ ಕಾಲೇಜು ಪ್ರೇಯಸಿ ಸಾನ್ವಿ ಜೋಸೆಫ್ ಪಾತ್ರದಲ್ಲಿ ನಟಿಸಿದರು. ಈ ಚಿತ್ರವು ವಿಮರ್ಶಕರು ಮತ್ತು ಪ್ರೇಕ್ಷಕರಿಂದ ಒಳ್ಳೆಯ ಪ್ರಶಂಸೆಗೆ ಪಾತ್ರವಾಯಿತು. ಜೊತೆಗೆ, ರಶ್ಮಿಕಾ ಅಭಿನಯವು ಮೆಚ್ಚುಗೆಯನ್ನು ಪಡೆಯಿತು ಹಾಗು ೨೦೧೬ ರ ಅತ್ಯುತ್ತಮ ನಟಿ (ಚೊಚ್ಚಲ) ಯಾಗಿ ದಕ್ಷಿಣ ಭಾರತೀಯ ಅಂತರರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ (SIIMA) ಪ್ರಶಸ್ತಿಯನ್ನು ಗೆದ್ದುಕೊಂಡರು.​
ಮಾರ್ಚ್ ೨೦೧೭ರ ವೇಳೆಗೆ, ರಶ್ಮಿಕಾ ಅವರು ಪುನೀತ್ ರಾಜ್‍ಕುಮಾರ್ ನೊಂದಿಗೆ ಹರ್ಷ ನಿರ್ದೇಶನದ ಚಲನಚಿತ್ರ ಅಂಜನಿ ಪುತ್ರ ಚಲನಚಿತ್ರದಲ್ಲಿ ಅಭಿನಯಿಸಿದರು. ಇವರು ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಚಮಕ್ ಸಿನಿಮಾದಲ್ಲಿ ಕೂಡ ನಟಿಸಿದ್ದಾರೆ. ಸದ್ಯ ಆಕೆಯ ತೆಲುಗು ಚಿತ್ರರಂಗದ ಚೊಚ್ಚಲ ಚಿತ್ರ 'ಚಲೋ' ನಾಗಾ ಶೋರಿಯಾರವರೊಡನೆ ಅಭಿನಯಿಸಿದ್ದು ತೆರೆ ಕಾಣಲು ಸಿಸಿದ್ದವಾಗಿದೆ.

ವೈಯಕ್ತಿಕ ಜೀವನ

ನಟ ರಕ್ಷಿತ್ ಶೆಟ್ಟಿಯೊಂದಿಗೆ ರಶ್ಮಿಕಾ ನಿಶ್ಚಿತಾರ್ಥ ಮಾಡಿಕೊಂಡರು. ಕಿರಿಕ್ ಪಾರ್ಟಿ ಚಿತ್ರವನ್ನು ಮಾಡುವಾಗ ಅವರು ಡೇಟಿಂಗ್ ಮಾಡಿದರು ಮತ್ತು ೩ ಜುಲೈ ೨೦೧೭ ರಂದು ವಿರಾಜ್‌ಪೇಟ್‌ನಲ್ಲಿ ಖಾಸಗಿ ಸಮಾರಂಭದಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು.​[೧೧] ಹೊಂದಾಣಿಕೆಯ ಸಮಸ್ಯೆಗಳನ್ನು ಉಲ್ಲೇಖಿಸಿ ದಂಪತಿಗಳು ಸೆಪ್ಟೆಂಬರ್ ೨೦೧೮ ರಲ್ಲಿ ಪರಸ್ಪರ ನಿಶ್ಚಿತಾರ್ಥವನ್ನು ಮುರಿದರು.

ಪ್ರಶಸ್ತಿಗಳು ಮತ್ತು ನಾಮನಿರ್ದೇಶನಗಳು

YearAwardLanguageFilmResult

೨೦೧೭ದಕ್ಷಿಣ ಭಾರತೀಯ ಅಂತರರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು - ಅತ್ಯುತ್ತಮ ನಟಿಕನ್ನಡಕಿರಿಕ್ ಪಾರ್ಟಿಗೆದ್ದ
ಐಐಎಫ್ಎ ಉತ್ಸವಮ್ ಪ್ರಶಸ್ತಿ - ಅತ್ಯುತ್ತಮ ನಟಿನಾಮನಿರ್ದೇಶನ
೨೦೧೮ಲವ್ ಲವಿಕೆ ರೀಡರ್ಸ್ ಚಾಯ್ಸ್ ಪ್ರಶಸ್ತಿ - ಅತ್ಯುತ್ತಮ ನಟಿಅಂಜನಿ ಪುತ್ರಗೆದ್ದ
ಝೀ ಕನ್ನಡ ಹೆಮ್ಮೆಯ ಕನ್ನಡತಿ ಪ್ರಶಸ್ತಿ- ಅತ್ಯುತ್ತಮ ನಟಿ
ದಕ್ಷಿಣ ಫಿಲ್ಮ್ಫೇರ್ ಪ್ರಶಸ್ತಿ - ಅತ್ಯುತ್ತಮ ನಟಿಚಮಕ್ನಾಮನಿರ್ದೇಶನ
ದಕ್ಷಿಣ ಭಾರತೀಯ ಅಂತರರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು - ಅತ್ಯುತ್ತಮ ನಟಿ


ಧನ್ಯವಾದಗಳು...







Post a Comment

0Comments
Post a Comment (0)